ಬೆಂಗಳೂರು:
ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಯನ್ನು ಇಂದು ಮುಕ್ತಾಯಗೊಳಿಸಿ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಭಾನುವಾರ ಸಂಜೆ ನವದೆಹಲಿಗೆ ತೆರಳಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಪ್ರಯಾಣಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರೂ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.