Home ಬೆಂಗಳೂರು ನಗರ ಬೆಲೆ ಏರಿಕೆ: ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ವಿಧಾನಸೌಧಕ್ಕೆ ‘ಎತ್ತಿನಗಾಡಿ ಚಲೋ’ ಪ್ರತಿಭಟನೆ

ಬೆಲೆ ಏರಿಕೆ: ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ವಿಧಾನಸೌಧಕ್ಕೆ ‘ಎತ್ತಿನಗಾಡಿ ಚಲೋ’ ಪ್ರತಿಭಟನೆ

126
0
ಪ್ರಾತಿನಿಧಿಕ ಚಿತ್ರ

ಬೆಂಗಳೂರು:

ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೀವನವನ್ನು ದುಸ್ಥಿತಿಯತ್ತ ದೂಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನೀತಿ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ದಿನಾಂಕ 13-09-2021ರ ಸೋಮವಾರ ಬೆಳಗ್ಗೆ 9 ಗಂಟೆಗೆ ‘ಎತ್ತಿನಗಾಡಿ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ 9 ಗಂಟೆಗೆ ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ.

ಅದೇ ರೀತಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುಮಾರಪಾರ್ಕ್ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here