ಬೆಂಗಳೂರು:
ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಏಪ್ರಿಲ್ 6 ರಂದು ಬೆಳಿಗ್ಗೆ 10.30ಕ್ಕೆ ದೇಶದ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪೆರೆನ್ಸ್ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರೂ ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು http://www.bjplive.org, http://twitter.com/BJP4India, http://facebook.com/BJP4India, http://youtube.com/BJP4India, http://www.bjp.org ಮತ್ತಿತರ ಸಾಮಾಜಿಕ ಜಾಲತಾಣಗಳನ್ನು ನೇರಪ್ರಸಾರ ಮಾಡಲಾಗುವುದು. ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಪಕ್ಷದ ಸ್ಥಾಪನಾ ದಿನವಾದ ಏಪ್ರಿಲ್ 6ರಂದು ಸ್ವಚ್ಛತಾ ಕಾರ್ಯಕ್ರಮ, ಏಕಬಳಕೆ ಪ್ಲಾಸ್ಟಿಕ್ ಬಳಕೆ ಉಪಯೋಗವನ್ನು ತೊರೆಯುವ ಸಂಕಲ್ಪ, ಹಿರಿಯ ನಾಗರಿಕರಿಗೆ ಸನ್ಮಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವದಂಥ ಯಾವುದಾದರೊಂದು ರಚನಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ಸ್ಥಾಪನೆ, ವಿಕಾಸದ ಹಾದಿಯ ಕುರಿತು ಚರ್ಚಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಪ್ರಧಾನಿಯವರಾದ ನರೇಂದ್ರ ಮೋದಿ ಅವರ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಅವುಗಳ ಅನುಷ್ಠಾನದ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.