Home ಕರ್ನಾಟಕ ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ ಹಾಗೂ ಕುಮಾರಸ್ವಾಮಿ

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ ಹಾಗೂ ಕುಮಾರಸ್ವಾಮಿ

5
0

ನವ ದೆಹಲಿ: ಮಾಜಿ ಪ್ರಧಾನಿಯೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ.

ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ ವಿಚಾರಗಳನ್ನ ಚರ್ಚಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here