Home ಆರೋಗ್ಯ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ

ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ

31
0
Advertisement
bengaluru

ನವದೆಹಲಿ:

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಎರಡನೇ ಸುತ್ತಿನ ಲಸಿಕೆ ಅಭಿಯಾನದಲ್ಲಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಪುದುಚೆರಿಯ ಸಿಸ್ಟರ್ ಪಿ ನಿವೇದಿತಾ ಅವರು ಭರತ್ ಬಯೋಟೆಕ್ ಕಂಪೆನಿ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯನ್ನು ಪ್ರಧಾನಿ ಮೋದಿಯವರಿಗೆ ಹಾಕಿದ್ದಾರೆ.

ಲಸಿಕೆ ಹಾಕಿಸಿಕೊಂಡ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ,ಕೋವಿಡ್-19 ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಡಲು ಸಮಯಕ್ಕೆ ಸರಿಯಾಗಿ ಕ್ಷಿಪ್ರವಾಗಿ ನಮ್ಮ ವಿಜ್ಞಾನಿಗಳು ಮತ್ತು ವೈದ್ಯರು ಕೆಲಸ ಮಾಡಿದ್ದಾರೆ. ಎರಡನೇ ಸುತ್ತಿನಲ್ಲಿ ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ನಾವೆಲ್ಲರೂ ಒಟ್ಟು ಸೇರಿ ಕೋವಿಡ್ ಮುಕ್ತ ಭಾರತ ನಿರ್ಮಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

ಮಾರ್ಚ್ 1, ಸೋಮವಾರ ದೇಶಾದ್ಯಂತ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ಎರಡನೇ ಸುತ್ತಿನ ಲಸಿಕಾ ಅಭಿಯಾನ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ.

bengaluru bengaluru

bengaluru

LEAVE A REPLY

Please enter your comment!
Please enter your name here