Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ
  • ರಾಜಕೀಯ
  • ಕರ್ನಾಟಕ
  • ಬೆಂಗಳೂರು ನಗರ

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

The Bengaluru Live June 23, 2021 7:00 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಇಲ್ಲದ ಯೋಜನೆ ಇದಾಗಿದೆ. ಭ್ರಷ್ಟಾಚಾರದಲ್ಲೇ ಮುಳುಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಇದರಿಂದ ವಿಲವಿಲ ಒದ್ದಾಡುವಂತಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಇ ಪ್ರಶಿಕ್ಷಣ ಚಿಂತನ ವರ್ಗದಲ್ಲಿ ವೆಬೆಕ್ಸ್ ಮೂಲಕ ಮಾತನಾಡಿದ ಅವರು, ಒಂದು ದೇಶದಲ್ಲಿ ಎರಡು ಕಾಯ್ದೆ ಇರಬಾರದು ಎಂಬ ಚಿಂತನೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರದಾಗಿತ್ತು. ಅದನ್ನು ವಿಶ್ವವಂದ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇóಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಈಡೇರಿಸಿದ್ದಾರೆ ಎಂದು ವಿವರಿಸಿದರು.

ದೇಶದ ಸಾರ್ವಭೌಮತೆ ಮತ್ತು ಏಕತೆಗೆ ವಿಶಿಷ್ಟ ಕೊಡುಗೆ ನೀಡಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಕನಸನ್ನು ನನಸಾಗಿಸುವತ್ತ ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರದ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಮತ್ತು ಜನರಿಗೆ ಮಾಹಿತಿ ಕೊಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಜನೆ ಮಾಡುವುದರ ಮುಖಾಂತರ ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಶ್ರೀ @nalinkateel ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

— Pralhad Joshi (@JoshiPralhad) June 23, 2021

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರವು ರೈತರಿಗೆ ನೆರವಾಗುತ್ತಿದೆ. ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು. ಹಿಂದೆ ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾತ್ರ ವಿಮಾನನಿಲ್ದಾಣಗಳಿದ್ದವು. ಈಗ ಉಡಾಣ್ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್, ಬೀದರ್ ಮತ್ತು ಕಲಬುರ್ಗಿಯಲ್ಲಿ ವಿಮಾನನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ಕೇಂದ್ರ ಸರಕಾರದ ಮಹತ್ವದ ಕೊಡುಗೆ ಎಂದು ವಿವರಿಸಿದರು.

ಜಲ ಮಿಷನ್ ಯೋಜನೆಯು ಪ್ರಧಾನಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮೂಲಸೌಕರ್ಯ ಹೆಚ್ಚಳಕ್ಕೆ ಭಾರತವು ಕಳೆದ ಏಳು ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಮೈಸೂರು- ಬೆಂಗಳೂರು, ಬೆಂಗಳೂರು- ಚೆನ್ನೈ ಕಾರಿಡಾರ್ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದರು.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ದಿನದಂದು ದೇಶದಲ್ಲಿ ಸುಮಾರು 86 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದೊಂದು ದೊಡ್ಡ ಸಾಧನೆ. ಆಕ್ಸಿಜನ್ ಪೂರೈಕೆಯನ್ನು 900 ಮೆಟ್ರಿಕ್ ಟನ್‍ನಿಂದ 9 ಸಾವಿರ ಮೆಟ್ರಿಕ್ ಟನ್‍ಗೆ ಹೆಚ್ಚಿಸಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಿದ್ದು ಕೂಡ ಕೋವಿಡ್ ಸಂದರ್ಭದ ಸಮರ್ಪಕ ನಿರ್ವಹಣೆಗೆ ಉದಾಹರಣೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷವು ಗರೀಬಿ ಹಠಾವೋ ಘೋಷಣೆಯು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಕಾಲದಲ್ಲಿ ಭ್ರಷ್ಟಾಚಾರ ಪ್ರಮಾಣ ಮಿತಿ ಮೀರಿತ್ತು. ಆದರೆ, ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭ್ರಷ್ಟಾಚಾರರಹಿತವಾಗಿ ಯೋಜನೆಯ ಪ್ರಯೋಜನವು ಫಲಾನುಭವಿಗಳಿಗೆ ಲಭಿಸುತ್ತಿದೆ ಎಂದು ತಿಳಿಸಿದರು.

ಶ್ರೀ ಜಗನ್ನಾಥ ರಾವ್ ಜೋಶಿ ಅವರ ಒಡನಾಟವು ನನ್ನ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದೆ ಎಂದು ಶ್ರೀ ಪ್ರಲ್ಹಾದ ಜೋಶಿ ಅವರು ವಿವರಿಸಿದರು. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಹಿರೇಮನೆ ಅವರು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿದ್ದರು.

ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿ ಹಾಗೂ ಸಹ ಪ್ರಭಾರಿಗಳು, ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪ್ರಶಿಕ್ಷಣ ತಂಡ, ಜಿಲ್ಲಾ ಪ್ರಭಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಂಸದರು, ಶಾಸಕರು, ಎಲ್ಲಾ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಪ್ರಶಿಕ್ಷಣ ವರ್ಗದಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ
Next: ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಡಿಸಿಎಂ

Related Stories

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

Latest Post

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
©Copyright 2025 The Bengaluru Live All rights reserved. | MoreNews by AF themes.