Home ಮೈಸೂರು ಬಲರಾಮ ಅಗಲಿಕೆಯಿಂದ ದುಃಖವಾಗಿದೆ: ಪ್ರಧಾನಿ ಕಂಬನಿ

ಬಲರಾಮ ಅಗಲಿಕೆಯಿಂದ ದುಃಖವಾಗಿದೆ: ಪ್ರಧಾನಿ ಕಂಬನಿ

33
0
Prime Minister Narendra Modi Saddened by Balarama Elephant's departure
Prime Minister Narendra Modi Saddened by Balarama Elephant's departure

ಮೈಸೂರು:

ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ, ಅನಾರೋಗ್ಯದಿಂದ ಅಸುನೀಗಿದ ಬಲರಾಮ ಆನೆಯ ಅಂತ್ಯಕ್ರಿಯೆ ಇಂದು ನೆರವೇರಿತು.

ನಾಗರಹೊಳೆ ಹುಲಿ ಅಭಯಾರಣ್ಯರಲ್ಲಿ ಬಲರಾಮದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿತ್ತು.

ಪ್ರಧಾನಿ ಟ್ವೀಟ್ ಮಾಡಿ: “ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.”

LEAVE A REPLY

Please enter your comment!
Please enter your name here