ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂನ್ 9 (ರವಿವಾರ)ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ, ಜೂನ್ 8ರಂದು ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು.
ತಮ್ಮ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರ ರಾಜೀನಾಮೆ ಪತ್ರಗಳನ್ನು ಅಂಗೀಕರಿಸಿ, ಹೊಸ ಸರಕಾರ ರಚನೆಯಾಗುವವರೆಗೂ ಅಧಿಕಾರದಲ್ಲಿ ಮುಂದುವರಿಯುವಂತೆ ಸೂಚಿಸಿದ್ದರು.
ಪ್ರಧಾನಿ ನರೇಂದ್ರ ಮೋದಿಯ ಪ್ರಮಾಣ ವಚನ ಸಮಾರಂಭದಲ್ಲಿ ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ ಹಾಗೂ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.