Home ಬೆಂಗಳೂರು ನಗರ ಮಾ. 25ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕೆ.ಆರ್‌.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ, ದಾವಣಗೆರೆ ರ್ಯಾಲಿಯಲ್ಲಿ ಭಾಗಿ

ಮಾ. 25ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕೆ.ಆರ್‌.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ, ದಾವಣಗೆರೆ ರ್ಯಾಲಿಯಲ್ಲಿ ಭಾಗಿ

23
0
Bengaluru: INDIAN ENERGY WEEK - 2023 will be inaugurated by the Prime Minister
bengaluru

ಬೆಂಗಳೂರು:

ಮಾರ್ಚ್ 25 ರಂದು ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ವೇಳೆ ಕೆ.ಆರ್‌.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ನೀಡಿ, ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.

ಮಾರ್ಚ್ 25 ರ ಬೆಳಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ನಂತರ ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಮೋಟ್ರೋಗೆ ಚಾಲನೆ ನೀಡಿ, ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ದಾವಣಗೆರೆಗೆ ತೆರಳಿ ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣೆ ಮಾಡಲಿದ್ದಾರೆ.

ನಂತರ ಶಿವಮೊಗ್ಗಕ್ಕೆ ತೆರಳಿ ಹೊಸ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆಂದು ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ದಾವಣಗೆರೆಯಲ್ಲಿ ಮುಕ್ತಾಯಗೊಳ್ಳಲಿದ್ದು, ಪ್ರಧಾನಿ ಮೋದಿಯವರು ಭಾಷಣ ಮಾಡುವ ಈ ರ್ಯಾಲಿಯಲ್ಲಿ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here