Karnataka Foundation Day | ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಕರ್ನಾಟಕ ರಾಜ್ಯ ಸಂಸ್ಥಾಪನಾ ದಿನದಂದು (ಕರ್ನಾಟಕ ರಾಜ್ಯೋತ್ಸವ) ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ ಮತ್ತು ಕರ್ನಾಟಕವು ಶ್ರೇಷ್ಟತೆಯತ್ತ ಸ್ಥಿರವಾಗಿ ಸಾಗಲಿ ಎಂದು ಹೇಳಿದರು.
ರಾಜ್ಯಗಳ ಮರುಸಂಘಟನೆಯ ನಂತರ ನವೆಂಬರ್ 1, 1956 ರಂದು ಕರ್ನಾಟಕ ರಾಜ್ಯ ರಚನೆಯಾಯಿತು. ರಾಜ್ಯವು ತನ್ನ 68 ನೇ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸುತ್ತಿದೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023
“ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ, ” ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಮತ್ತಷ್ಟು ಅಭಿವೃದ್ಧಿ ಹೊಂದಲಿ ಮತ್ತು ಇನ್ನಷ್ಟು ಹೊಸತನದೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.