Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ
  • ರಾಜಕೀಯ

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ

The Bengaluru Live November 9, 2026 8:14 PM
ಬಿಳಿಚೋಡಿನಲ್ಲಿ ಹೂಗಳೊಂದಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಮುಖಂಡರು

ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ. ಚಿತ್ರ: ಸಚಿವರ ಮಾಧ್ಯಮ ಗುಂಪು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಜಗಳೂರು (ದಾವಣಗೆರೆ): ಸರ್ಕಾರ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸೇವಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಭಾರತ್ ಜೋಡೋ ಯಾತ್ರೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು.

ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಒಟ್ಟು ₹31.82 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಕೆಲವು ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

ಮರಗಳ ಸಾಲಿನ ರಸ್ತೆಯಲ್ಲಿ ಬಿಳಿ ಉಡುಪಿನಲ್ಲಿ ನಡೆದು ಬರುತ್ತಿರುವ ಮುಖಂಡರು
ಜಗಳೂರು ತಾಲೂಕಿನ ಬಿಳಿಚೋಡು ಕಾರ್ಯಕ್ರಮದ ವೇಳೆ ಮೆರವಣಿಗೆಯಲ್ಲಿ ಸಾಗಿದ ಮುಖಂಡರು. ಚಿತ್ರ: ಸಚಿವರ ಮಾಧ್ಯಮ ಗುಂಪು

ಬಿಳಿಚೋಡು ಗ್ರಾಮ ರಾಜಕೀಯ, ಸಾಮಾಜಿಕ ಹಾಗೂ ಐತಿಹಾಸಿಕವಾಗಿ ವಿಶೇಷ ಹಿನ್ನೆಲೆ ಹೊಂದಿದೆ. ಈ ಗ್ರಾಮದಲ್ಲಿ ಅಶ್ವತ್ಥರೆಡ್ಡಿ ಅವರಂತಹ ನಾಯಕರು ಬೆಳೆದುಬಂದಿದ್ದಾರೆ. ಗ್ರಾಮದ ಆಂಜನೇಯ ಸ್ವಾಮಿ ಆರಾಧ್ಯ ದೈವವಾಗಿದ್ದು, ಚನ್ನಯ್ಯ ಒಡೆಯರ್ ಹಾಗೂ ಭೀಮಣ್ಣ ನಾಯಕ ಅವರಂತಹ ಮಹನೀಯರು ಜನಿಸಿದ ಪುಣ್ಯಭೂಮಿ ಇದಾಗಿದೆ ಎಂದು ಸ್ಮರಿಸಿದರು.

ಸಿರಿಗೆರೆ ಶ್ರೀಗಳು ಜನಪರ ಕಾಳಜಿಯಿಂದ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಜನರಿಗೆ ಮೌಲ್ಯಯುತವಾದ ಸಂದೇಶಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸುಮಾರು ₹10 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಅದು ಅರ್ಹ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪರಿಷತ್ತಿನ ಸಭೆ ಕರೆದು ಅನುದಾನದ ಸದ್ಬಳಕೆ ಹಾಗೂ ಸಮುದಾಯಗಳಿಗೆ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ನನ್ನ ರಾಜಕೀಯ ಹಾಗೂ ಸಾರ್ವಜನಿಕ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡಲಾಗಿದೆ. ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಸಿಕ್ಕಿರುವ ಅವಕಾಶವಾಗಿದ್ದು, ಅದನ್ನು ಜನರ ಕಲ್ಯಾಣಕ್ಕಾಗಿ ಬಳಸಿಕೊಳ್ಳಬೇಕು ಎಂದು ಸಚಿವ ರಘುಮೂರ್ತಿ ಹೇಳಿದರು.

ಅಧಿಕಾರಕ್ಕಾಗಿ ಪ್ರತಿಪಕ್ಷಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ

ವಿರೋಧ ಪಕ್ಷದವರು ಅಧಿಕಾರಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿದಿದ್ದು, ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸಚಿವ ಟಿ. ರಘುಮೂರ್ತಿ ಹೇಳಿದರು.

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು ₹16 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ವಿರೋಧ ಪಕ್ಷದವರು ಸರ್ಕಾರದ ಜನಪರ ಕೆಲಸಗಳನ್ನು ಗುರುತಿಸುವ ಬದಲು ವೈಯಕ್ತಿಕ ಟೀಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ವೈಯಕ್ತಿಕ ಟೀಕೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಏನು ಅನುದಾನ ಹಾಗೂ ಯೋಜನೆಗಳನ್ನು ತಂದಿದ್ದಾರೆ ಎಂಬುದನ್ನು ವಿರೋಧ ಪಕ್ಷದವರು ಜನರಿಗೆ ತಿಳಿಸಬೇಕು ಎಂದು ಸಚಿವರು ಸವಾಲು ಹಾಕಿದರು.

ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಸಚಿವ ಟಿ. ರಘುಮೂರ್ತಿ ಅವರು ಮೂರು ಬಾರಿ ಶಾಸಕರಾಗಿ ಜನರ ವಿಶ್ವಾಸ ಗಳಿಸಿ ಇಂದು ಸಚಿವ ಸ್ಥಾನ ಅಲಂಕರಿಸಿದ್ದಾರೆ. ಅವರ ಸಾರ್ವಜನಿಕ ಸೇವೆ ಮತ್ತು ಕಾರ್ಯವೈಖರಿ ಮಾದರಿಯಾಗಿದೆ ಎಂದರು.

ಚಿಕ್ಕಮ್ಮನಹಟ್ಟಿ ಸೇರಿದಂತೆ ತಾಲೂಕಿನ ಕುಗ್ರಾಮಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಪರಿಹರಿಸುವುದರೊಂದಿಗೆ ಹಳ್ಳಿಯಿಂದ ದೆಹಲಿಯವರೆಗೆ ನಮ್ಮ ಭಾಗದ ಜನರ ಧ್ವನಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ರಾಜಕೀಯ ಹಿನ್ನೆಲೆ ಹೊಂದಿರುವ ಗ್ರಾಮಗಳು ನಮ್ಮ ಭಾಗದಲ್ಲಿದ್ದು, ಕಡಬನಕಟ್ಟೆ ಸೇರಿದಂತೆ ಹಲವು ಗ್ರಾಮಗಳು ರಾಜಕೀಯವಾಗಿ ವಿಶಿಷ್ಟ ಇತಿಹಾಸ ಹೊಂದಿವೆ ಎಂದು ಹೇಳಿದರು.

₹31.82 ಕೋಟಿ ವೆಚ್ಚದ ಕಾಮಗಾರಿಗಳ ವಿವರ

ಬಿಳಿಚೋಡು ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಒಟ್ಟು ₹31.82 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಟಿ. ರಘುಮೂರ್ತಿ ಅವರು ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು. ಪ್ರಮುಖ ಕಾಮಗಾರಿಗಳ ವಿವರ ಹೀಗಿದೆ: ₹10 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ, ₹23.48 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ಕಟ್ಟಡ ಉದ್ಘಾಟನೆ, ₹25 ಲಕ್ಷ ವೆಚ್ಚದಲ್ಲಿ ಬಿಳಿಚೋಡು ಗ್ರಾಮದ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ಬಿಳಿಚೋಡು ಗ್ರಾಮದಲ್ಲಿ ಸಮುದಾಯ ಭವನ ಉದ್ಘಾಟನೆ, ₹15.75 ಕೋಟಿ ವೆಚ್ಚದಲ್ಲಿ ಬಗ್ಗೇನಹಳ್ಳಿ ಗ್ರಾಮದಲ್ಲಿ ನೂತನ ಕೈಗಾರಿಕಾ ಪ್ರದೇಶ ಸ್ಥಾಪನೆ, ₹85.17 ಲಕ್ಷ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ, ₹73.50 ಲಕ್ಷ ವೆಚ್ಚದಲ್ಲಿ ನೂತನ ಕಾರ್ಯಪಾಲನಾ ಶಾಖಾ ಕಟ್ಟಡ ನಿರ್ಮಾಣ ಹಾಗೂ ₹2 ಕೋಟಿ ವೆಚ್ಚದಲ್ಲಿ ಜಗಳೂರು ಪಟ್ಟಣದಲ್ಲಿ ಕ್ರೀಡಾ ಅಂಕಣ ನಿರ್ಮಾಣ.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುಬಸವರಾಜ್, ಕೆಂಚಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ಶಶಿಕಾಂತ್, ಜಿಲ್ಲಾ ಪಂಚಾಯಿತಿ ಇಲಾಖೆಯ ಎಇಇ ಸಿ. ತಿಪ್ಪೇಸ್ವಾಮಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಓಮಣ್ಣ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್‌ಪಟೇಲ್, ಮುಖಂಡ ರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇನ್ನಷ್ಟು ಸಂಬಂಧಿತ ಸುದ್ದಿಗಳನ್ನು ಓದಿ:

  • ಹೊಸದುರ್ಗದಲ್ಲಿ ಪ್ರಜಾಸೇವಾ ಆಂದೋಲನ: ಚಿತ್ರದುರ್ಗ ಜಿಲ್ಲೆಯಲ್ಲಿ 770 ಅರ್ಜಿಗಳ ಪೈಕಿ 759 ವಿಲೇವಾರಿ ಎಂದ ಸಚಿವ ರಘುಮೂರ್ತಿ

About the Author

The Bengaluru Live

Administrator

Visit Website View All Posts

Post navigation

Previous: ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

Related Stories

ಕರ್ನಾಟಕ ಸರ್ಕಾರದ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಮೇಜಿನ ಮುಂಭಾಗದಲ್ಲಿ ಕುಳಿತಿರುವ ಸಚಿವರು
  • ರಾಜಕೀಯ

ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

The Bengaluru Live November 9, 2026 8:14 PM
ಬಸ್ ನಿಲ್ದಾಣದ ಬಳಿ ಮೈಕ್ರೋಫೋನ್‌ಗಳ ಮುಂದೆ ಮಾತನಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಸ್ಥಳ ಪರಿಶೀಲಿಸಿದ್ದೇನೆ; ಲಾಲ್‌ಬಾಗ್ ಬಳಿ ಹಳ್ಳ, ಪರ್ಯಾಯ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್

The Bengaluru Live November 9, 2026 7:04 PM
ಬಿಳಿ ಉಡುಪಿನಲ್ಲಿರುವ ಡಿ.ಕೆ. ಶಿವಕುಮಾರ್ ಹಳದಿ ಗುಲಾಬಿ ಹೂಗುಚ್ಛವನ್ನು ಸಿದ್ದರಾಮಯ್ಯ ಅವರಿಗೆ ನೀಡುತ್ತಿರುವ ದೃಶ್ಯ
  • ಕರ್ನಾಟಕ
  • ರಾಜಕೀಯ

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

The Bengaluru Live November 9, 2026 6:53 PM

Latest Post

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ ಬಿಳಿಚೋಡಿನಲ್ಲಿ ಹೂಗಳೊಂದಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಮುಖಂಡರು
  • ರಾಜಕೀಯ

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ

November 9, 2026 8:14 PM
ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕ ಸರ್ಕಾರದ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಮೇಜಿನ ಮುಂಭಾಗದಲ್ಲಿ ಕುಳಿತಿರುವ ಸಚಿವರು
  • ರಾಜಕೀಯ

ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

November 9, 2026 8:14 PM
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ₹38 ಕೋಟಿ ವೆಚ್ಚದ ಪ್ರವಾಸಿ ಸ್ನೇಹಿ ಕಾಮಗಾರಿ, ಹೊಸ ಸೌಲಭ್ಯಗಳ ಉದ್ಘಾಟನೆ: ಸಚಿವ ರಾಮಲಿಂಗಾ ರೆಡ್ಡಿ ನಾಮಫಲಕದ ಬಳಿ ಸಚಿವರು ಹಾಗೂ ಅಧಿಕಾರಿಗಳು ನಡೆದು ಬರುತ್ತಿರುವ ದೃಶ್ಯ
  • ಕರ್ನಾಟಕ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ₹38 ಕೋಟಿ ವೆಚ್ಚದ ಪ್ರವಾಸಿ ಸ್ನೇಹಿ ಕಾಮಗಾರಿ, ಹೊಸ ಸೌಲಭ್ಯಗಳ ಉದ್ಘಾಟನೆ: ಸಚಿವ ರಾಮಲಿಂಗಾ ರೆಡ್ಡಿ

November 9, 2026 7:22 PM
ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಸ್ಥಳ ಪರಿಶೀಲಿಸಿದ್ದೇನೆ; ಲಾಲ್‌ಬಾಗ್ ಬಳಿ ಹಳ್ಳ, ಪರ್ಯಾಯ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್ ಬಸ್ ನಿಲ್ದಾಣದ ಬಳಿ ಮೈಕ್ರೋಫೋನ್‌ಗಳ ಮುಂದೆ ಮಾತನಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಸ್ಥಳ ಪರಿಶೀಲಿಸಿದ್ದೇನೆ; ಲಾಲ್‌ಬಾಗ್ ಬಳಿ ಹಳ್ಳ, ಪರ್ಯಾಯ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್

November 9, 2026 7:04 PM
ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಿಳಿ ಉಡುಪಿನಲ್ಲಿರುವ ಡಿ.ಕೆ. ಶಿವಕುಮಾರ್ ಹಳದಿ ಗುಲಾಬಿ ಹೂಗುಚ್ಛವನ್ನು ಸಿದ್ದರಾಮಯ್ಯ ಅವರಿಗೆ ನೀಡುತ್ತಿರುವ ದೃಶ್ಯ
  • ಕರ್ನಾಟಕ
  • ರಾಜಕೀಯ

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

November 9, 2026 6:53 PM
ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ; ಒಂದು ಲಕ್ಷ ಆಸ್ತಿದಾರರಿಗೆ ಭೂ ಗ್ಯಾರಂಟಿ: ಸಿಎಂ ಡಿ.ಕೆ. ಶಿವಕುಮಾರ್ ಕನ್ನಡ ಬ್ಯಾನರ್ ಮುಂದೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ; ಒಂದು ಲಕ್ಷ ಆಸ್ತಿದಾರರಿಗೆ ಭೂ ಗ್ಯಾರಂಟಿ: ಸಿಎಂ ಡಿ.ಕೆ. ಶಿವಕುಮಾರ್

November 9, 2026 6:22 PM

ನೀವು ತಪ್ಪಿಸಿಕೊಂಡಿರಬಹುದು

ಬಿಳಿಚೋಡಿನಲ್ಲಿ ಹೂಗಳೊಂದಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಮುಖಂಡರು
  • ರಾಜಕೀಯ

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ

The Bengaluru Live November 9, 2026 8:14 PM
ಕರ್ನಾಟಕ ಸರ್ಕಾರದ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಮೇಜಿನ ಮುಂಭಾಗದಲ್ಲಿ ಕುಳಿತಿರುವ ಸಚಿವರು
  • ರಾಜಕೀಯ

ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

The Bengaluru Live November 9, 2026 8:14 PM
ನಾಮಫಲಕದ ಬಳಿ ಸಚಿವರು ಹಾಗೂ ಅಧಿಕಾರಿಗಳು ನಡೆದು ಬರುತ್ತಿರುವ ದೃಶ್ಯ
  • ಕರ್ನಾಟಕ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ₹38 ಕೋಟಿ ವೆಚ್ಚದ ಪ್ರವಾಸಿ ಸ್ನೇಹಿ ಕಾಮಗಾರಿ, ಹೊಸ ಸೌಲಭ್ಯಗಳ ಉದ್ಘಾಟನೆ: ಸಚಿವ ರಾಮಲಿಂಗಾ ರೆಡ್ಡಿ

The Bengaluru Live November 9, 2026 7:22 PM
ಬಸ್ ನಿಲ್ದಾಣದ ಬಳಿ ಮೈಕ್ರೋಫೋನ್‌ಗಳ ಮುಂದೆ ಮಾತನಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಸ್ಥಳ ಪರಿಶೀಲಿಸಿದ್ದೇನೆ; ಲಾಲ್‌ಬಾಗ್ ಬಳಿ ಹಳ್ಳ, ಪರ್ಯಾಯ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್

The Bengaluru Live November 9, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಬಿಳಿಚೋಡಿನಲ್ಲಿ ₹31.82 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ
  • ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ; ವಸ್ತುಸಂಗ್ರಹಾಲಯ, ಸಂಶೋಧನಾ ಕೇಂದ್ರಕ್ಕೂ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ
  • ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ₹38 ಕೋಟಿ ವೆಚ್ಚದ ಪ್ರವಾಸಿ ಸ್ನೇಹಿ ಕಾಮಗಾರಿ, ಹೊಸ ಸೌಲಭ್ಯಗಳ ಉದ್ಘಾಟನೆ: ಸಚಿವ ರಾಮಲಿಂಗಾ ರೆಡ್ಡಿ
  • ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಸ್ಥಳ ಪರಿಶೀಲಿಸಿದ್ದೇನೆ; ಲಾಲ್‌ಬಾಗ್ ಬಳಿ ಹಳ್ಳ, ಪರ್ಯಾಯ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್
©Copyright 2025 The Bengaluru Live All rights reserved. | MoreNews by AF themes.