Home ಶಿವಮೊಗ್ಗ Shimoga: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ...

Shimoga: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ

27
0
Private bus collides with electric pole; Electric shock to 35 students, condition of two is critical
Private bus collides with electric pole; Electric shock to 35 students, condition of two is critical

ಶಿವಮೊಗ್ಗ:

ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಹೊಳೆಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಎಸ್ ಬಿಕೆ ಸಂಸ್ಥೆಗೆ ಸೇರಿದ ಖಾಸಗಿ ಬಸ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ 35 ವಿದ್ಯಾರ್ಥಿಗಳು ಶಾಕ್‌ಗೆ ಒಳಗಾಗಿದ್ದಾರೆ. ಅಲ್ಲದೆ ಕೆಲವರು ಬಸ್ಸಿನೊಳಗೇ ಉರುಳಿ ಬಿದ್ದರು.

ವಿದ್ಯುತ್ ಶಾಕ್ ನಿಂದ ಅಸ್ವಸ್ಥಗೊಂಡಿರುವವರನ್ನು ಕೂಡಲೇ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್ ಮೇಲೆ ವಿದ್ಯುತ್ ತಂತಿ ಬಿದ್ದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here