private transport union's August 10 deadline in Karnataka
ಬೆಂಗಳೂರು:
ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಜುಲೈ 27ರಂದು ನೀಡಲಾಗಿತ್ತು ಬೆಂಗಳೂರು ಬಂಧವನ್ನು ಹಿಂಪಡೆಯಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಡೆಸಿದ ಸಭೆ ಯಶಸ್ವಿಯಾಗಿದೆ.
ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳು ಮತ್ತು ಆಟೋ ಚಾಲಕರು ಸಂಕಷ್ಟಕ್ಕೀಡಾಗಿದ್ದು ಹೀಗಾಗಿ, ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಜುಲೈ 27ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿತ್ತು.
ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಆಟೋ ಚಾಲಕರ ಸಮಸ್ಯೆ ಬೇರೆ ಇದೆ. ಟ್ಯಾಕ್ಸಿ ಸಮಸ್ಯೆ ಬೇರೆ ಇದೆ. ಇನ್ನು ಶಕ್ತಿ ಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿಗೊಳಿಸಿದಾಗಿನಿಂದ ತಮ್ಮ ಆದಾಯಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರ ಒಕ್ಕೂಟ ಆರೋಪಿಸಿದೆ.
ಶಕ್ತಿ ಯೋಜನೆಯಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ಆಟೋ ಚಾಲಕರಿಗೆ ಮಾಸಿಕ 10,000 ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂಬುದು ಆಟೋ ಒಕ್ಕೂಟಗಳ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಇದಲ್ಲದೆ, ವಾಣಿಜ್ಯ ಸರಕು ವಾಹನಗಳು ಮತ್ತು ಕ್ಯಾಬ್‌ಗಳ ಮೇಲಿನ ಜೀವಮಾನದ ತೆರಿಗೆ ಹೆಚ್ಚಳದ ವಿರುದ್ಧ ಫೆಡರೇಶನ್‌ನ ಸದಸ್ಯರು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.
