ಧಾರವಾಡ:
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಧಾರವಾಡ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಹೋಟೆಲ್‌ವೊಂದರಲ್ಲಿ ನಡೆದ ಸಭೆಯಲ್ಲಿ ಲಿಂಗಾಯತ ಸಮುದಾಯದ ಪ್ರಮುಖರು ಪಾಲ್ಗೊಂಡರು.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ- ಧಾರವಾಡ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶೆಟ್ಟರ್ ಗೆಲುವಿಗೆ ಶ್ರಮಿಸುವಂತೆ ಪ್ರಿಯಾಂಕಾ ಕರೆ ನೀಡಿದರು. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ತವರು ನೆಲದಲ್ಲಿ ಶೆಟ್ಟರ್ ಅವರನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ನಿಯೋಜಿಸಿದೆ. ‘ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರನ್ನು ತನ್ನ ತೆಕ್ಕೆಗೆ ಸೆಳೆಯಲು ಬಿಜೆಪಿ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ನಂತರ ಕುಂದಗೋಳದಲ್ಲಿ ನಡೆದ ಪ್ರಿಯಾಂಕಾ ಗಾಂಧಿ ಅವರ ರೋಡ್ ಶೋನಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ, ಜನರಿಗೆ ಸಂಕಷ್ಟಗಳು ಉಲ್ಬಣಗೊಂಡವು” ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಜೀವನ ಸುಧಾರಿಸುತ್ತದೆ ಎಂದರು.
ಪ್ರಿಯಾಂಕಾ ಗಾಂಧಿ ಭಾನುವಾರ ಖಾನಾಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಉತ್ತರ ಕರ್ನಾಟಕದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.