ಮೇ 31ರೊಳಗೆ ಆಸ್ತಿ ತೆರಿಗೆ ಪಾವತಿಸಿ 5% ರಿಯಾಯಿತಿ ಪಡೆಯಿರಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ
ಬೆಂಗಳೂರು, ಮೇ 29: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಆಸ್ತಿ ಮಾಲೀಕರು ಮೇ 31ರೊಳಗೆ ಆಸ್ತಿ ತೆರಿಗೆ ಪಾವತಿಸಿ ಶೇಕಡಾ 5 ರಿಯಾಯಿತಿಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ ಮಾಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕೇಂದ್ರ, ಪಶ್ಚಿಮ, ಪೂರ್ವ, ದಕ್ಷಿಣ ಹಾಗೂ ಉತ್ತರ ನಗರ ನಿಗಮಗಳಲ್ಲಿ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪಾವತಿಸುವ ತೆರಿಗೆದಾರರಿಗೆ ಶೇಕಡಾ 5 ರಿಯಾಯಿತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮೇ 31ರಂದು ಈ ರಿಯಾಯಿತಿ ಅವಧಿ ಕೊನೆಗೊಳ್ಳಲಿದ್ದು, ಜೂನ್ 2026ರಿಂದ ಯಾವುದೇ ರಿಯಾಯಿತಿ ಲಭ್ಯವಿರುವುದಿಲ್ಲ. ಆದ್ದರಿಂದ ನಾಗರಿಕರು ವಿಳಂಬ ಮಾಡದೆ ಕೂಡಲೇ ಆಸ್ತಿ ತೆರಿಗೆ ಪಾವತಿಸಿ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಮನವಿ ಮಾಡಲಾಗಿದೆ.
ಆಸ್ತಿ ತೆರಿಗೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ಆನ್ಲೈನ್ ಪೋರ್ಟಲ್ ಮೂಲಕ ಪಾವತಿಸಬಹುದಾಗಿದೆ.
ಆಸ್ತಿ ತೆರಿಗೆ ಪಾವತಿ ಕುರಿತು ಮಾಹಿತಿ, ಮಾರ್ಗದರ್ಶನ ಅಥವಾ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ನಾಗರಿಕರು ಜಿಬಿಎ ಸಹಾಯವಾಣಿ ಸಂಖ್ಯೆ 1533 ಅನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆಯಬಹುದು.
ತೆರಿಗೆ ಪಾವತಿಯನ್ನು ಕೊನೆಯ ಕ್ಷಣಕ್ಕೆ ಮುಂದೂಡದೆ, ನಿಗದಿತ ಅವಧಿಯೊಳಗೆ ಪಾವತಿಸಿ ಶೇಕಡಾ 5 ರಿಯಾಯಿತಿಯ ಲಾಭ ಪಡೆಯುವಂತೆ ಜಿಬಿಎ ಸಾರ್ವಜನಿಕರಿಗೆ ಮನವಿ ಮಾಡಿದೆ.
