ಬೆಂಗಳೂರು:
ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.
ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್ ನ್ಯಾಯಾಂಗ ಬಂಧನ ವಿಸ್ತರಣೆ: ಸಿಐಡಿಗೆ ಹೈಕೋರ್ಟ್ ನೋಟಿಸ್
2021ರ ಅಕ್ಟೋಬರ್ 3ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.