Home ಚಿಕ್ಕಬಳ್ಳಾಪುರ Nandi Hills: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ

Nandi Hills: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ

43
0
Public entry ban to Nandi Hills for 2 days
Public entry ban to Nandi Hills for 2 days

ಚಿಕ್ಕಬಳ್ಳಾಪುರ:

ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದು, ಸತ್ಯಸಾಯಿ ಲೋಕಸೇವಾ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಇಂದಿನಿಂದ ಎರಡು ದಿನ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದಾರೆ.

ಆದರೆ, ಪ್ರವೇಶ ನಿರ್ಬಂಧದ ಬಗ್ಗೆ ಮಾಹಿತಿ ಇಲ್ಲದೇ ಗಿರಿಧಾಮಕ್ಕೆ ಆಗಮಿಸಿದ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ.

ಇಂದು ಬೆಳಗ್ಗೆ 6 ರಿಂದ ಜುಲೈ 3ರ ಸಂಜೆ 6ರವರೆಗೆ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ ಇರಲಿದೆ. ಸದ್ಯ ಗಿರಿಧಾಮಗಳಿಗೆ ಬರದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here