Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ಗ್ರಾಮಾಂತರ
  • ಏಪ್ರಿಲ್ 01 ರಿಂದ 15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ
  • ಬೆಂಗಳೂರು ಗ್ರಾಮಾಂತರ

ಏಪ್ರಿಲ್ 01 ರಿಂದ 15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಬೆಂಗಳೂರು ಗ್ರಾಮೀಣ ಜಿಲ್ಲೆ: ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು...
The Bengaluru Live March 31, 2026 5:48 PM 1 minute read
Public to participate in census from April 1 to 15: Deputy Commissioner Dr. KN Anuradha

ಏಪ್ರಿಲ್ 01 ರಿಂದ 15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು ಗ್ರಾಮೀಣ ಜಿಲ್ಲೆ: ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ಕಾರ್ಯ ನಡೆಯಲಿದೆ.

ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ ಆದ census.gov.in ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದ್ದು ಮೊಬೈಲ್, ಡೆಸ್ಕ್ ಟಾಪ್, ಲ್ಯಾಪ್ ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿ ಆಗಲಿದೆ.

ಮಾಹಿತಿ ಭರ್ತಿಯ ವೇಳೆ, ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ.

ಸ್ವಯಂ-ಗಣತಿ (Self-Enumeration) ಪೋರ್ಟಲ್ನಲ್ಲಿ ಕೇಳುವ ಪ್ರಶ್ನೆಗಳು ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆಪ್ನಲ್ಲಿರುವಂತೆಯೇ ರೂಪಿಸಲ್ಪಟ್ಟಿದ್ದು, ಕೆಲವು ಮಾಹಿತಿಗಳು ಪೂರ್ವಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು (FAQs) ಮತ್ತು ಮಾರ್ಗಸೂಚಿಗಳನ್ನೂ ಒದಗಿಸಲಾಗುತ್ತದೆ.

ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Self-Enumeration ID) ನೀಡಲಾಗುತ್ತದೆ. ಈ ಐಡಿಯನ್ನು SMS ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (Enumerator) ಈ ಐಡಿಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು.

ಜನಗಣತಿ-2027 ಕ್ಕೆ ಸಂಬಂಧಿಸಿ ಸಾರ್ವಜನಿಕರು ವೈಯಕ್ತಿಕ ಮಾಹಿತಿಯ ಗೌಪ್ಯತೆಯನ್ನು ಸಂಪೂರ್ಣವಾಗಿ ಕಾಯ್ದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

The Bengaluru Live

Administrator

View All Posts

Post navigation

Previous: ಪರಪ್ಪನ ಅಗ್ರಹಾರ ಜೈಲಿಗೆ ಡ್ರಗ್ಸ್ ಮತ್ತು ಸಿಮ್ ಕಾರ್ಡ್ ಕಳ್ಳ ಸಾಗಣೆ ಯತ್ನ: ಯುವತಿ ಬಂಧನ
Next: ಹೊರಗುತ್ತಿಗೆ ಸಿಬ್ಬಂದಿ ಸೇವೆ ಮುಂದುವರಿಕೆ ಕುರಿತು ಸರ್ಕಾರದಿಂದ ಯಾವುದೇ ಆದೇಶ ಇಲ್ಲ: ನಕಲಿ ಜ್ಞಾಪನದ ಬಗ್ಗೆ ಸ್ಪಷ್ಟನೆ

Related Stories

ವೇದಿಕೆಯ ಎದುರು ಚಪ್ಪರದ ಕೆಳಗೆ ಕುಳಿತಿರುವ ಜನಸ್ತೋಮ
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ

The Bengaluru Live November 14, 2026 6:30 PM
ಅಲಂಕೃತ ಚಪ್ಪರದ ಕೆಳಗೆ ಹೂಮಾಲೆ ಹಾಕಿದ ಎರಡು ಪುತ್ಥಳಿಗಳು
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ
  • ರಾಜಕೀಯ

ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ

The Bengaluru Live November 14, 2026 3:00 PM
ದೇವನಹಳ್ಳಿಯಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಕ್ರೀಡಾಂಗಣದಲ್ಲಿ ವೃತ್ತಾಕಾರವಾಗಿ ಪ್ರದರ್ಶನ ನೀಡುತ್ತಿರುವ ಬಿಳಿ-ಹಳದಿ ಉಡುಪಿನ ವಿದ್ಯಾರ್ಥಿಗಳು
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರದಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ಪರಿಹಾರಕ್ಕೆ ₹52.88 ಕೋಟಿ ಅಗತ್ಯ ಎಂದು ಅಂದಾಜು

The Bengaluru Live November 1, 2026 7:03 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.