ಬೆಂಗಳೂರು:
ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪಿಯು ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಅಧಿಕೃತ ವೇಳಾಪಟ್ಟಿ ಪ್ರಕಟಿಸಿದ ಅವರು, ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಗಳಿಗೆ ಬಂದಿರುವ ಆಕ್ಷೇಪಣೆಗಳು, ನೀಟ್, ಜೆಇಇಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸ್ವೀಕರಿಸಲು ಅವಧಿ ಮುಗಿದ ತಕ್ಷಣವೇ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.