Home ಆರೋಗ್ಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

42
0

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನವರಿ 31 ರಿಂದ ಫೆಬ್ರವರಿ 03 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಸಂತರನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತದನಂತರ ಕಂದಾಯ ಸಚಿವರು ಆರ್.ಅಶೋಕ್ ಹಾಗೂ ಆಯುಕ್ತರು ಮಂಜುನಾಥ್ ಪ್ರಸಾದ್ ರವರು ಹೆಚ್. ಸಿದ್ಧಯ್ಯ ರೆಫೆರಲ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

WhatsApp Image 2021 01 31 at 12.21.36

ಇಡೀ ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ನಗರದಾದ್ಯಂತ 5 ವರ್ಷದೊಳಗಿನ 10,84,392 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ ಎಂದು ಆಡಳಿತಗಾರರು ರವರು ತಿಳಿಸಿದರು.

ಪಾಲಿಕೆಯ ಆರೋಗ್ಯ ಇಲಾಖೆ ವತಿಯಿಂದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, 3,340 ಬೂತ್‌ಗಳು, 456 ಸ್ಥಿರ ತಂಡಗಳು, 324 ಸಂಚಾರಿ ತಂಡಗಳು, 14,922 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದ್ದು, ಲಸಿಕೆ ಹಾಕಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಈ ಪೈಕಿ ಪೋಷಕರು ಎಲ್ಲಾ ಮಕ್ಕಳು ಆಯಾ ಬೂತ್ ಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು. ತದನಂತರ ಫೆ. 3 ರವರೆಗೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ. ಎಲ್ಲರೂ ಪಲ್ಸ್ ಪೊಲಿಯೊ ಲಸಿಕೆ ಹಾಕಿಸಿಕೊಳ್ಳುವ ಮೂಲಕ ನಗರವನ್ನು ಪೊಲಿಯೊ ಮುಕ್ತವನ್ನಾಗಿಸಬೇಕು ಎಂದು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರು (ಆರೋಗ್ಯ) ರಾಜೇಂದ್ರ ಚೋಳನ್, ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ, ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ಡಾ.‌ ವಿಜೇಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here