ಸಚಿವರ ವಿರುದ್ಧದ ಸ್ಟಿಂಗ್ ಆರೋಪದ ಸತ್ಯ ಹೊರಬರಲಿ, ತಪ್ಪಿತಸ್ಥರ ಮೇಲೆ ಕ್ರಮವಾಗಲಿ: ಆರ್. ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರಿಗೆ ಸಂಬಂಧಿಸಿದಂತೆ ಸ್ಟಿಂಗ್ ಆಪರೇಷನ್ ನಡೆದಿದೆ ಎಂಬ ವರದಿಗಳ ಸತ್ಯಾಸತ್ಯತೆ ಹೊರಬರಬೇಕು ಹಾಗೂ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಎದುರಿಸಬೇಕು ಎಂದು ಬಿಜೆಪಿ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಸ್ಟಿಂಗ್ ಆಪರೇಷನ್ ನಡೆದಿದೆ ಮತ್ತು ಸಿಡಿಗಳಿವೆ ಎಂಬ ವರದಿಗಳು ರಾಜ್ಯ ರಾಜಕೀಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿವೆ ಎಂದು ಅಶೋಕ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸಂಬಂಧಿಸಿ ಇಂತಹ ಆರೋಪಗಳು ಕೇಳಿಬರುತ್ತಿರುವುದು ಆತಂಕಕಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ವಿಚಾರದಲ್ಲಿ ಸತ್ಯ ಹೊರಬರಬೇಕು, ರಾಜ್ಯದ ಜನತೆಗೆ ವಾಸ್ತವಾಂಶ ತಿಳಿಯಬೇಕು ಎಂದು ಒತ್ತಾಯಿಸಿರುವ ಅವರು, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
