ಬೆಂಗಳೂರು:
ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅವರು ಸದಾಶಿವನಗರದಲ್ಲಿರುವ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ, ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಅವರಿಗೆ ಸಾಂತ್ವನ ಹೇಳಿದರು.

ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ @ashwinipuneet ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.
— Rahul Gandhi (@RahulGandhi) March 31, 2022
ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ. pic.twitter.com/YPgFZGOZsM
ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ನಟ ರಾಘವೇಂದ್ರ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.