
Rain likely for 5 days from today in many parts of the state; Meteorological department forecast
ಬೆಂಗಳೂರು:
ರಾಜ್ಯದ ಜನ ಬಿಸಿಲಿನ ಝಳದಿಂದ ಕಂಗೆಟ್ಟಿದ್ದು, ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆನ್ನೆಯು ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣನ ಸಿಂಚನವಾಗಿದೆ.
ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮುಂದಿನ ಸೋಮವಾರದಿಂದ ಮಳೆಯ ಪ್ರಮಾಣ ಕೊಂಡ ಹೆಚ್ಚಾಗಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ವೇಳೆ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ. ಶನಿವಾರವೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.