Home ಬೆಂಗಳೂರು ನಗರ ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಸಚಿವೆ ನಿರ್ಮಲಾ ಸೀತಾರಾಮನ್​, ಜಗ್ಗೇಶ್‌ಗೆ ಬಿಜೆಪಿ ಟಿಕೆಟ್

ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಸಚಿವೆ ನಿರ್ಮಲಾ ಸೀತಾರಾಮನ್​, ಜಗ್ಗೇಶ್‌ಗೆ ಬಿಜೆಪಿ ಟಿಕೆಟ್

21
0
Rajya Sabha polls: Nirmala Sitharaman, Jaggesh gets BJP ticket from Karnataka
bengaluru

ಬೆಂಗಳೂರು:

ಕರ್ನಾಟಕದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್‌ಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ಘೋಷಣೆ ಮಾಡಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯು ಅಂತಿಮವಾಗಿ ಟಿಕೆಟ್‌ ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಟಿಕೆಟ್‌ ನೀಡಿರುವ ಆದೇಶ ಹೊರಡಿಸಿದ್ದಾರೆ.

ವಿವಿಧ ರಾಜ್ಯಗಳಿಂದ ಖಾಲಿ ಆಗಲಿರುವ ಒಟ್ಟು 16 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದ್ದು, ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ಮಹಾರಾಷ್ಟ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಒಕ್ಕಲಿಗ ಸಮುದಾಯವನ್ನು ಪರಿಗಣಿಸಿ ಜಗ್ಗೇಶ್‌ಗೆ ಟಿಕೆಟ್‌ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

bengaluru
bengaluru

LEAVE A REPLY

Please enter your comment!
Please enter your name here