Home ಕರ್ನಾಟಕ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರಿಕೆ

ರಕ್ಷಾ ರಾಮಯ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರಿಕೆ

189
0
Raksha Ramaiah and Mohammad Nalpad with KPCC president DK Shivakumar

ಮೊಹಮ್ಮದ್‌ ನಲಪಾಡ್‌ಗೆ ಜನವರಿ 31, 2022 ರಿಂದ ಯುವ ಕಾಂಗ್ರೆಸ್‌ ನೇತೃತ್ವ

ಬೆಂಗಳೂರು:

ಯುವ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಎಂ.ಆರ್‌. ಸೀತಾರಾಮ್‌ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ 2022ರ ಜನವರಿ 31ರವರೆಗೆ ಯುವ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಸೋಮವಾರ ಈ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Raksha Ramaiah and Mohammad Nalpad with KPCC president DK Shivakumar

ಕಳೆದ ಜನವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ( 64,203) ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ ಎಂದು ಆದೇಶ ಹೇಳಿದೆ.

LEAVE A REPLY

Please enter your comment!
Please enter your name here