Home ರಾಜಕೀಯ ರಾಮಲಿಂಗಾ ರೆಡ್ಡಿ, ಧೃವನಾರಾಯಣ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಕಾರ್ಯಕ್ರಮ ನಾಳೆ

ರಾಮಲಿಂಗಾ ರೆಡ್ಡಿ, ಧೃವನಾರಾಯಣ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಕಾರ್ಯಕ್ರಮ ನಾಳೆ

92
0

ಬೆಂಗಳೂರು:

ನೂತನವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾ ರೆಡ್ಡಿ ರವರು ಹಾಗೂ ಧೃವನಾರಾಯಣ ರವರು ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 10-45 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಚೌಡಯ್ಯ ಮೆಮೋರಿಯಲ್ ಹಾಲ್’ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರು, ವಹಿಸಲಿದ್ದು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆರವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್.ಆರ್ ಪಾಟೀಲ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪಧಾದಿಕಾರಿಗಳು, ಸಿ.ಡ್ಲ್ಯೂ.ಸಿ ಸದಸ್ಯರುಗಳು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ಮೂಂಚೂಣಿ ಘಟಕಗಳು ಹಾಗೂ ವಿಭಾಗಗಳ ಅಧ್ಯಕ್ಷರುಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪಧಾದಿಕಾರಿಗಳು ಹಾಗೂ ಬಿಬಿಎಂಪಿ ಸದಸ್ಯರುಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here