Home ಬೆಂಗಳೂರು ನಗರ Ramalinga Reddy’s letter to D.K.Shivakumar to withdraw unscientific property tax revision immediately...

Ramalinga Reddy’s letter to D.K.Shivakumar to withdraw unscientific property tax revision immediately | ಈ ಕೂಡಲೇ ಅವೈಜ್ಞಾನಿಕ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ವಾಪಸ್ ಪಡೆಯಲು ಡಿ.ಕೆ.ಶಿವಕುಮಾರ್ ಗೆ ರಾಮಲಿಂಗಾ ರೆಡ್ಡಿ ಪತ್ರ

390
0
Ramalinga Reddy's letter to D.K.Shivakumar to withdraw unscientific property tax revision immediately

ಬೆಂಗಳೂರು:

ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಿ ಕಳೆದ 2016-17ನೆ ಸಾಲಿನಿಂದಲೇ ಪರಿಷ್ಕೃತ ದರವನ್ನು ಪಾವತಿಸುವಂತೆ ಆಸ್ತಿ ಮಾಲಕರಿಗೆ ನೀಡಿರುವ ನೋಟಿಸ್‍ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy), ಈ ಕೂಡಲೇ ಅವೈಜ್ಞಾನಿಕ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ವಾಪಸ್ ಪಡೆಯುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿ 2016-17ನೆ ಸಾಲಿನಿಂದ ಆಸ್ತಿ ತೆರಿಗೆ ಮೊತ್ತವನ್ನು ಪಾವತಿಸುವಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ನೋಟಿಸ್ ನೀಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಅಲ್ಲದೆ, ಬಿಬಿಎಂಪಿ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ಯಾವುದೇ ಮಾರ್ಗಸೂಚಿಗಳನ್ನು ಅನುಸರಿಸದೆ 2016-17 ಸಾಲಿನಿಂದ 7 ವರ್ಷಗಳಿಗೆ ಪರಿಷ್ಕರಣೆ ನೋಟಿಸ್ ಜಾರಿ ಮಾಡಿರುವುದು ಕಂಡುಬಂದಿದೆ.

Ramalinga Reddy's letter to D.K.Shivakumar to withdraw unscientific property tax revision immediately

ಈ ರೀತಿ ಸಾರ್ವಜನಿಕರ ಮೇಲೆ ಒತ್ತಡ ತರುತ್ತಿರುವುದು ಉತ್ತಮವಲ್ಲ. ಕರ್ನಾಟಕ ಮುನ್ಸಿಪಾಲಿಟಿ ಕಾಯ್ದೆ (ಕೆಎಂಸಿ)-1976 ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಯ್ದೆ-2020 ಅನ್ವಯ ಒಮ್ಮಲೇ 7 ವರ್ಷಗಳ ಆಸ್ತಿ ತೆರಿಗೆಯನ್ನು ಪರಿಷ್ಕರಿಸುವುದು ನಿಯಮಬಾಹಿರವಾಗಿರುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೆಂಗಳೂರು ಉಸ್ತಿವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಬೇಕು. ಬಿಬಿಎಂಪಿ ವಿಧಿಸುತ್ತಿರುವ ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು. ಈ ಮೂಲಕ ಬೆಂಗಳೂರಿನ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here