Home ಸಿನಿಮಾ ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ವಿಧಿವಶ

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ವಿಧಿವಶ

29
0

ಹೈದರಾಬಾದ್: ರಾಮೋಜಿ ಫಿಲ್ಮ್​ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (97) ನಿಧನ ಹೊಂದಿದ್ದಾರೆ.

ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್​ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ. ಇದು ವಿಶ್ವ ದಾಖಲೆ ಪಟ್ಟಿಯಲ್ಲೂ ಇದೆ.

LEAVE A REPLY

Please enter your comment!
Please enter your name here