Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Randeep Singh Surjewala warns | ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಸಚಿವರು, ಶಾಸಕರ ವಿರುದ್ಧ ಶಿಸ್ತು ಕ್ರಮ: ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ
  • ಬೆಂಗಳೂರು ನಗರ

Randeep Singh Surjewala warns | ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಸಚಿವರು, ಶಾಸಕರ ವಿರುದ್ಧ ಶಿಸ್ತು ಕ್ರಮ: ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ

The Bengaluru Live November 1, 2023 3:50 PM 1 minute read
Randeep Singh Surjewala and DK Shivakumar at a presser

Randeep Singh Surjewala warns | ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಸಚಿವರು, ಶಾಸಕರ ವಿರುದ್ಧ ಶಿಸ್ತು ಕ್ರಮ: ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

“ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಮುಂಬರುವ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ನಿಗಮ-ಮಂಡಳಿ ನೇಮಕ ಹಾಗೂ ಪಕ್ಷದ ನಾಯಕರ ಹೇಳಿಕೆಗಳ ವಿಚಾರವಾಗಿ ಬುಧವಾರ ಸುದೀರ್ಘ ಚರ್ಚೆ ನಡೆಸಿದರು.

ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ ಅವರು: “ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು. ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತನಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ.”

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜಂಟಿ ಮಾಧ್ಯಮಗೋಷ್ಠಿ. https://t.co/PILoVJWlxT

— Karnataka Congress (@INCKarnataka) November 1, 2023

ಅಶಿಸ್ತಿನ ಹೆಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾರೇ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ. ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ.

ಇಂದು ನಡೆದ ಸುದೀರ್ಘ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಕರ್ನಾಟಕ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯ ಕೇಂದ್ರವಾಗಿದೆ. ಸಂಸತ್ ಚುನಾವಣೆಯಲ್ಲಿ ರಾಜ್ಯದ ಜನ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲವು ನಿಶ್ಛಿತವಾಗಿದೆ. ಇಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿದ್ದು, ಈ ಪವಿತ್ರ ದಿನ ಎಲ್ಲಾ ಕನ್ನಡಿಗರಿಗೂ ಶುಭಕೊರುತ್ತೇನೆ. ಈ ರಾಜ್ಯವನ್ನು ನಾವೆಲ್ಲ ಒಟ್ಟಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯೋಣ.

ಮುಂದಿನ 15 ದಿನಗಳಲ್ಲಿ ಸಂಸತ್ ಚುನಾವಣೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆ ಆದರೂ ಅದಕ್ಕೆ ಸಂಬಂಧಿಸಿದ ಸಚಿವರುಗಳು ಸಮಸ್ಯೆ ಬಗೆಹರಿಸಲಿದ್ದಾರೆ.

ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ.”

ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, “ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ. ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: Leopard Captured | ಬೊಮ್ಮನಹಳ್ಳಿಯಲ್ಲಿ ಸೆರೆ ಸಿಕ್ಕ ಚಿರತೆ
Next: Kannada Rajyotsava | ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವುದೇ ಪಂಚಗ್ಯಾರಂಟಿಗಳ ಉದ್ದೇಶ, ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ: : ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಸಿಂಗಸಂದ್ರದಲ್ಲಿ ಕಟ್ಟಡದ ಮುಂದೆ ವ್ಯಕ್ತಿಯೊಬ್ಬರಿಗೆ ದಂಡದ ರಸೀದಿ ನೀಡುತ್ತಿರುವ ಸಮವಸ್ತ್ರಧಾರಿ ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್
  • ಬೆಂಗಳೂರು ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ಕಸ ಎಸೆಯುವವರ ವಿರುದ್ಧ ಕಾರ್ಯಾಚರಣೆ: ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್‌ಗಳಿಂದ 68 ಪ್ರಕರಣ, ₹76,500 ದಂಡ ವಸೂಲಿ

The Bengaluru Live November 9, 2026 11:35 AM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

Latest Post

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM

ನೀವು ತಪ್ಪಿಸಿಕೊಂಡಿರಬಹುದು

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
©Copyright 2025 The Bengaluru Live All rights reserved. | MoreNews by AF themes.