Home ಬೆಂಗಳೂರು ನಗರ ಅತ್ಯಾಚಾರ, ಕೊಲೆ ಪ್ರಕರಣ: ಮಹಜರು ವೇಳೆ ಪರಾರಿಯಾಗಲು ಯತ್ನ, ಆರೋಪಿ ಕಾಲಿಗೆ ಗುಂಡೇಟು

ಅತ್ಯಾಚಾರ, ಕೊಲೆ ಪ್ರಕರಣ: ಮಹಜರು ವೇಳೆ ಪರಾರಿಯಾಗಲು ಯತ್ನ, ಆರೋಪಿ ಕಾಲಿಗೆ ಗುಂಡೇಟು

17
0
Rape, murder case: accused tried to escape, shot in leg during mahazar
Rape, murder case: accused tried to escape, shot in leg during mahazar
Advertisement
bengaluru

ಬೆಂಗಳೂರು:

ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಬನ್ನೇರುಘಟ್ಟ ಪೊಲೀಸರು ಗುಂಡು ಹಾರಿಸಿದ್ದಾರೆ.

ಬ್ಯಾಟರಾಯನದೊಡ್ಡಿ ಹೊರ ವಲಯದಲ್ಲಿ ನಡೆದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಶೇಖರ್, ಹರೀಶ್ ಮತ್ತು ಜಯಂತ್ ರಾವ್ ಸೇರಿ ಮೂವರನ್ನು ಬಂಧಿಸಲಾಗಿತ್ತು.

ಮೂವರು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಆರೋಪಿ ಸೋಮಶೇಖರ್ ಪೋಲೀಸ್ ಸಿಬ್ಬಂದಿ ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದ. ಈವೇಳೆ ಆರೋಪಿಯ ಎಡಗಾಲಿಗೆ ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ಗುಂಡು ಹಾರಿಸಿದ್ದಾರೆ.

bengaluru bengaluru

ಗುಂಡೇಟು ತಿಂದ ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿ ಮಾದಪ್ಪ ಅವರನ್ನು ಚಂದಾಪುರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಆರೋಪಿ ಹಲ್ಲೆ ನಡೆಸಿದ್ದರಿಂದ ಪೊಲೀಸ್ ಪೇದೆ ಮಾದಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


bengaluru

LEAVE A REPLY

Please enter your comment!
Please enter your name here