Home ರಾಜಕೀಯ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ : ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ : ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

9
0

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಸಿದ್ದರಾಮಯ್ಯರ ಪರ, ಡಿಕೆ ಶಿವಕುಮಾರ್ ಪರ- ವಿರುದ್ಧ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಕಾಂಗ್ರೆಸ್ ಶಾಸಕರು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕುರಿತ ಹೇಳಿಕೆ ನೀಡಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳು ಹೇಳಿದ್ದನ್ನು ನೆನಪು ಮಾಡಿಕೊಂಡಿದ್ದರು. ಅಧಿಕಾರ ಸಿಗದೆ ಇದ್ದಲ್ಲಿ ಅದನ್ನು ಒದ್ದು ಕಿತ್ತುಕೊಳ್ಳಬೇಕೆಂದು ಡಿ.ಕೆ.ಶಿವಕುಮಾರ್ ಅವರಿಗೆ ಅವರ ಗುರುಗಳು ಹೇಳಿದ್ದರಂತೆ ಎಂದು ಗಮನ ಸೆಳೆದರು.

ಮತ್ತೊಂದೆಡೆ ಮೊನ್ನೆ ಡಿ.ಕೆ.ಶಿವಕುಮಾರ್ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಈ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅಥವಾ ಸರಕಾರದಲ್ಲಿ ಯಾರು ಶಿವಕುಮಾರರಿಗೆ ಮುಖ್ಯಮಂತ್ರಿ ಆಗಲು ಅವಕಾಶ ನೀಡುತ್ತಿಲ್ಲವೋ ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ಚರ್ಚೆಯಲ್ಲಿದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here