Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Rashtriya Swayamsevak Sangh | ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ
  • ರಾಜಕೀಯ
  • ಕರ್ನಾಟಕ
  • ಮೈಸೂರು

Rashtriya Swayamsevak Sangh | ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ

Rashtriya Swayamsevak Sangh | Sangh Parivar never came to freedom struggle, now they talk about patriotism: CM sarcasm
The Bengaluru Live April 26, 2025 1:00 PM 1 minute read
Rashtriya Swayamsevak Sangh | Sangh Parivar never came to freedom struggle, now they talk about patriotism: CM sarcasm

Rashtriya Swayamsevak Sangh | ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್: ಸಿ.ಎಂ

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ: ಸಿ.ಎಂ.ಸಿದ್ದರಾಮಯ್ಯ

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದರು: ಸಿ.ಎಂ

ಮೈಸೂರು ಏ 26: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿ.ಎಂ ವ್ಯಂಗ್ಯವಾಡಿದರು.‌

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, RSS ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಭಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.

“ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಡ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ ಎಂದರೆ.

ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರವತಂದ ತಿದ್ದುಪಡಿಯನ್ನು ಎತ್ತಿ ಹಿಡಿದು ಇದು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು ಎಂದರು.

ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಕರೆ ನೀಡಿದರು.

About the Author

The Bengaluru Live

Administrator

Visit Website View All Posts

Post navigation

Previous: Terror Attack | ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ : ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178ಕನ್ನಡಿಗರು ಸುರಕ್ಷಿತವಾಗಿ ಇಂದು ಮಧ್ಯಾಹ್ನ ತಾಯ್ನಾಡಿಗೆ
Next: CM Siddaramaiah | ಅಭಿವೃದ್ಧಿಗೆ ನಾವು ಹಣ ಕೊಡ್ತಿದ್ದೀವಿ. ಜನ ಖುಷಿಯಾಗಿದ್ದಾರೆ. ಬಿಜೆಪಿ ಗೆ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ

Related Stories

ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM
ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

The Bengaluru Live November 13, 2026 4:13 PM
ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

The Bengaluru Live November 13, 2026 3:14 PM

Latest Post

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM
ಮೆಟ್ರೋ ವೆಚ್ಚದಲ್ಲಿ ಕೇಂದ್ರ–ರಾಜ್ಯ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಮನವಿ; ಬೆಂಗಳೂರಿಗೆ 500 ಕಿ.ಮೀ. ಮೆಟ್ರೋ ಗುರಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಮೆಟ್ರೋ ವೆಚ್ಚದಲ್ಲಿ ಕೇಂದ್ರ–ರಾಜ್ಯ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಮನವಿ; ಬೆಂಗಳೂರಿಗೆ 500 ಕಿ.ಮೀ. ಮೆಟ್ರೋ ಗುರಿ

November 13, 2026 3:13 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM
ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

The Bengaluru Live November 13, 2026 4:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
  • ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ
©Copyright 2025 The Bengaluru Live All rights reserved. | MoreNews by AF themes.