
Record 1.05 crore people traveled in transport buses in Karnataka: Minister Ramalinga Reddy
ಬೆಂಗಳೂರು:
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ. ಇಂದು ಒಂದೇ ದಿನ 1.05 ಕೋಟಿ ಮಂದಿ ಪ್ರಯಾಣ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಶಕ್ತಿ ಯೋಜನೆ ಜಾರಿಗೂ ಮೊದಲು 84.15 ಲಕ್ಷ ಜನರ ಪ್ರಯಾಣ ಮಾಡುತ್ತಿದ್ದರು ಎಂದರು.
ಇಂದು ಶಾಂತಿನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ ವಿವಿಧ ಸಾರಿಗೆ ಇಲಾಖೆಗಳ ಎಂಡಿಗಳ ಜೊತೆ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.