Home ಕಲಬುರ್ಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ: ಸಿಎಂ

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ: ಸಿಎಂ

48
0
Recruitment process to start to fill 14000 posts in Kalyana Karnataka region: CM
bengaluru

ಕಲ್ಬುರ್ಗಿ/ಬೆಂಗಳೂರು::

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

bengaluru

ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

bengaluru

LEAVE A REPLY

Please enter your comment!
Please enter your name here