Home ರಾಜಕೀಯ ಗ್ರಹ ಜೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿ 18ಜೂನ್ ರಿಂದ ಪ್ರಾರಂಭ

ಗ್ರಹ ಜೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿ 18ಜೂನ್ ರಿಂದ ಪ್ರಾರಂಭ

81
0
Registration of Beneficiaries under Griha Joti Yojana starts from June 18
Registration of Beneficiaries under Griha Joti Yojana starts from June 18

ಬೆಂಗಳೂರು:

ಕರ್ನಾಟಕ ಸರ್ಕಾರವು ಗ್ರಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿಯನ್ನು ದಿನಾಂಕ:18.06.2023 ರಿಂದ ಚಾಲನೆಗೊಳಿಸಲಿದೆ.

ಗ್ರಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಛಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ (Custom-made) ಸೇವಾ ಸಿಂಧು ರ್ಫೋಟಲ್‌ನಲ್ಲಿ (https://sevasindhugs.karnataka.gov.in) ನೋಂದಾಯಿಸಿಕೊಳ್ಳಬಹುದಾಗಿದೆ. ಸದರಿ ತಂತ್ರಾಂಶವನ್ನು ಮೊಬೈಲ್ ಫೋನ್ / ಕಂಪ್ಯೂಟರ್ಸ್ /ಲ್ಯಾಪ್ ಟ್ಯಾಪ್ ಗಳ ಮೂಲಕವೂ ಸಹ ಬಳಸಬಹುದಾಗಿದೆ.

ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ID ಗಳ ಮಾಹಿತಿಗಳನ್ನು (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ನೊಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಬೆಂಗಳೂರು ಒನ್‌, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್‌ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಛೇರಿಗಳಲ್ಲಿಯೂ ಸಹ ನೊಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಛೇರಿ ಅಥವಾ 24×7 ಸಹಾಯವಾಣಿ-1912ಗೆ ಕರೆಮಾಡಬಹುದಾಗಿದೆ.

ಗೃಹ ಜ್ಯೋತಿ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ರಾಜ್ಯದಲ್ಲಿನ ಪತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪುತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.

ಈ ಯೋಜನೆಯು ರಾಜ್ಯದಲ್ಲಿ ಮೊದಲ ಭಾರಿಗೆ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮವಾಗಿದ್ದು, ಇದರಿಂದ ರಾಜ್ಯದ 2 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಈ ಯೋಜನೆಯು 2023ರ ಆಗಸ್ಟ್ 1 (ಜುಲೈ ಮಾಹಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು, ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ಲನ್ನು ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here