ಬೆಂಗಳೂರು:
ಖ್ಯಾತ ಪತ್ರಕರ್ತ, ಅಂಕಣಕಾರ, ಬರಹಗಾರ ರವಿ ಬೆಳಗೆರೆ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಪದ್ಮನಾಭನಗರದ ಕಚೇರಿಯಲ್ಲಿ ರಾತ್ರಿ 12.15 ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಮಕ್ಕಳು ಹಾಗೂ ಇಬ್ಬರು ಪತ್ನಿಯರನ್ನು ಅವರು ಅಗಲಿದ್ದಾರೆ.
ಮುಖ್ಯಮಂತ್ರಿ ಸಂತಾಪ
ಲೇಖಕ, ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆಗಲಿಕೆಯಿಂದ ಆಗಿರುವ ನೋವು ನಿವಾರಿಸುವ ಶಕ್ತಿಯನ್ನು ಕುಟುಂಬದವರಿಗೆ, ಅಭಿಮಾನಿಗಳಿಗೆ, ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಎಂದು ಟ್ವೀಟ್ ಮಾಡಿದ್ದಾರೆ.
ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) November 13, 2020
ಈ ನಡುವೆ ಸಂಜೆ 4 ಗಂಟೆಗೆ ಬನಶಂಕರಿ ಚಿತಾರದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಅವರ ಪುತ್ರ ಕರ್ಣ ಹೇಳಿದ್ದಾರೆ.