Home ಆರೋಗ್ಯ ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು

ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು

12
0

ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಕಿಪಾಕ್ಸ್ ಕಾಯಿಲೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಸಂಬಂಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜನರು ಯಾರು ಆತಂಕ ಪಡುವ ಅಗತ್ಯ ಇಲ್ಲ. ಮಂಕಿಪಾಕ್ಸ್ ನಮ್ಮ ದೇಶ ಮತ್ತು ನಮ್ಮ ರಾಜ್ಯದಲ್ಲಿ ಪತ್ತೆ ಆಗಿಲ್ಲ. ಹೀಗಿದ್ದರೂ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಹಾಸಿಗೆ ಮೀಸಲು ಇರಿಸಲಾಗಿದೆ. ತೀವ್ರ ನಿಗಾ ಘಟಕ (ಐಸಿಯು) ಬೆಡ್ ಸಿದ್ಧತೆಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು

LEAVE A REPLY

Please enter your comment!
Please enter your name here