Home ಬೆಳಗಾವಿ ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ : ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ : ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

48
0
ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ:

ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗವಾವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದುಅತ್ಯಂತ ದು:ಖಕರ ಸಂಗತಿ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ. ಗಾಯಗೊಂಡವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿ 5 ಲಕ್ಷ ರೂ. ಪರಿಹಾರ :

ಅಪಘಾತಕ್ಕೆ ಒಳಗಾದವರಲ್ಲಿ 5 ಜನ ಕಾರ್ಮಿಕರಿದ್ದು, ಅವರಿಗೆ ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿಯಾಗಿ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ಭ್ರೂಣ ಹತ್ಯೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ :

ಬೆಳಗಾವಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರೂಣಹತ್ಯೆ ಗಂಭೀರವಾದ ವಿಷಯವಾಗಿದೆ. ಕೃತ್ಯ ನಡೆದಿರುವ ಆಸ್ಪತ್ರೆಯ ಮಾಹಿತಿ ಈಗಾಗಲೇ ದೊರೆತಿದೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಲು ಆದೇಶ ನೀಡಲಾಗಿದೆ. ಈ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here