ಬೆಂಗಳೂರು:
ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ.
ಬೈಕ್ ಸವಾರ ಹಾಗೂ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನನ್ನು ಸುನೀಲ್ (28) ಎಂದು ಗುರುತಿಸಲಾಗಿದ್ದು, ಸದ್ಯ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.
ಲಾರಿ ಚಾಲಕ ಏಕಾಏಕೀ ಬ್ರೇಕ್ ಹಾಕಿದ ಪರಿಣಾಮ ಲಾರಿಗೆ ಓಮ್ನಿ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.