Home ಬೆಂಗಳೂರು ನಗರ Road Show: 26 ರಂದು ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ ದೇವೇಗೌಡ

Road Show: 26 ರಂದು ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ ದೇವೇಗೌಡ

52
0
Road Show: Devegowda to participate in a 100 km road show from Kumbalgodu to Mysore on March 26
Advertisement
bengaluru

ಬೆಂಗಳೂರು:

ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ. ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು. ಆ ರೋಡ್ ಶೋ ದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು.

ಈ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಕುಮಾರಸ್ವಾಮಿ ಅವರು ನುಡಿದರು.

bengaluru bengaluru


bengaluru

LEAVE A REPLY

Please enter your comment!
Please enter your name here