
Rowdy murdered within hours of his release from prison in Bengaluru
ಬೆಂಗಳೂರು:
ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಇಂದು ಸಂಜೆ ರೌಡಿಶೀಟರ್ ಸಿದ್ದಾಪುರ ಮಹೇಶ್ ನನ್ನು ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.
ವಿಲ್ಸನ್‌ಗಾರ್ಡನ್ ನಾಗ, ಸಿದ್ದಾಪುರ ಮಹೇಶ್ ಮಧ್ಯೆ ದ್ವೇಷವಿತ್ತು. 2020ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್ ಕೊಲೆ ಕೇಸ್‌ನಲ್ಲಿ ಭಾಗಿಯಾಗಿ ಮಹೇಶ್ ಜೈಲು ಸೇರಿದ್ದರು.
ಹೊಸ ರೋಡ್ ಜಂಕ್ಷನ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶ್ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು, ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.