ಬೆಂಗಳೂರು: ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ(28) ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಆಗಿದ್ದು, 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ ಪ್ರಕರಣದಲ್ಲಿ ಅರುಣ್ ಜೈಲುಪಾಲಾಗಿದ್ದ.
ನಂತರ ಜಾಮೀನಿನ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇತ್ತೀಚಿಗೆ ಅರುಣ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅರುಣ್ ರೂಮಿನ ಬಾಗಿಲು ತೆರೆಯದೇ ಇದ್ದಾಗ, ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.