Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕಂಬಳಕ್ಕೆ (Kambala) ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್
  • ಬೆಂಗಳೂರು ನಗರ

ಕಂಬಳಕ್ಕೆ (Kambala) ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್

Vighnesh Pawar October 12, 2023 2:30 PM 1 minute read
Rs 1 crore subsidy from government for Kambala: DCM D.K.Sivakumar

Rs 1 crore subsidy from government for Kambala: DCM D.K.Sivakumar

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

“20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ) ನೆರವೇರಿಸಿ ಮಾತನಾಡಿದ ಅವರು “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದು ಹೇಳಿದರು.

ಮನುಷ್ಯನ ಬಳಿ ತೆಗೆದುಕೊಂದು ಹೋಗಲು ಏನೂ ಇಲ್ಲ, ತನ್ನ ಬಳಿ ಇರುವುದನ್ನೆಲ್ಲಾ ಬಿಟ್ಟು ಹೋಗಲೇಬೇಕು. ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕರಾದ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.

WhatsApp Image 2023 10 12 at 3.24.20 PM

“ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋಧ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ತಿಳಿಸಿದರು.

ಈ ದೇಶಕ್ಕೆ ದೊಡ್ಡ ಆಸ್ತಿಯೇ ನಮ್ಮ ಸಂಸ್ಕೃತಿ. ಅದೇ ರೀತಿ ದಕ್ಷಿಣ ಕನ್ನಡ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ದಕ್ಷಿಣ ಕನ್ನಡದ ಆಚರಣೆ ಬೆಂಗಳೂರಿನಲ್ಲೂ ನಡೆಯಬೇಕು ಎನ್ನುವ ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗಲು ಎಲ್ಲರೂ ಒಗ್ಗಟ್ಟಾಗಿ ಸೇರಿ ಮಾದರಿ ಕೆಲಸ ಮಾಡುತ್ತಿದ್ದೀರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು. ಸಾವಿರಾರು ಯುವಕರು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ, ಈ ಅವಕಾಶ ಬಳಸಿಕೊಳ್ಳಿ ಎಂದು ತಿಳಿಸಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯ ಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು ಎಂದರು.

About the Author

Vighnesh Pawar

Subscriber

View All Posts

Post navigation

Previous: ಕರ್ನಾಟಕ ಸರ್ಕಾರವು ಐದನೇ ರಾಜ್ಯ ಹಣಕಾಸು ಆಯೋಗವನ್ನು ರಚಿಸಿದೆ
Next: Load Shedding in Karnataka | ಲೋಡ್ ಶೆಡ್ಡಿಂಗ್ ಬಗ್ಗೆ ಟೀಕೆ ಮಾಡುವ ಬಿಜೆಪಿ, ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.