ಬೆಂಗಳೂರು:
ಶೇ 50ರಷ್ಟು ರಿಯಾಯಿತಿ ಘೋಷಣೆ ಆದೇಶ ಹೊರಬೀಳುತ್ತಿದ್ದಂತೆ ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 7,216 ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯವರೆಗೆ 22.49 ಲಕ್ಷ ರು ದಂಡ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಸಂಚಾರ ಪೊಲೀಸರು, 2023ರ ಫೆಬ್ರುವರಿ 11ರೊಳಗಿನ ಪ್ರಕರಣಗಳಿಗೆ ರಿಯಾಯಿತಿ ಸೌಲಭ್ಯ ಅನ್ವಯವಾಗಲಿದೆ. ಸೆಪ್ಟೆಂಬರ್ 9ರವರೆಗೆ ದಂಡ ಪಾವತಿಸಲು ಅವಕಾಶವಿದೆ ಎಂದಿದ್ದಾರೆ.