ಬೆಂಗಳೂರು:
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ.
ಅಕ್ರಮವಾಗಿ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿದ್ದ 87.56 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು ಚಿನ್ನವನ್ನು ಪತ್ತೆ ಮಾಡಿ 27.11.2020 ರಂದು ಪ್ರಕರಣವನ್ನು ದಾಖಲಿಸಿದ್ದಾರೆ. ರೂ. 87,56,026/- ಲಕ್ಷ ಮೌಲ್ಯದ ಇದನ್ನು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ಪ್ರಯಾಣಿಕನನ್ನು ಬಂಧಿಸಲಾಗಿತ್ತು. @cbic_india https://t.co/QGzykYwNbd
— Bengaluru Customs (@blrcustoms) November 28, 2020
ಏರ್ ಇಂಟಲಿಜೆನ್ಸ್ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಈ ಕುರಿತು ಕಸ್ಟಮ್ಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಸ್ತುವಿನೊಂದಿಗೆ ಚಿನ್ನ ಬಚ್ಚಿಡಲಾಗಿತ್ತು. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪರಿಶೀಲನೆ ಮಾಡಿ 87,56,026 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು. ನ. 27ರಂದು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.