Saalumarada Thimmakka slipped and fell, admitted to hospital
ಬೆಂಗಳೂರು:
ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ, 112 ವರ್ಷದ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಇಂದು ಸಂಜೆ 4.30ರ ಸುಮಾರಿಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.
