Home ಅಪರಾಧ ಸಂಪತ್ ರಾಜ್ ಬಂಧನ ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿ

ಸಂಪತ್ ರಾಜ್ ಬಂಧನ ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿ

93
0

ಬೆಂಗಳೂರು:

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, ಸಂಪತ್ ರಾಜ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ತಲೆಮರೆಸಿಕೊಂಡಿದ್ದು, ಸೋಮವಾರರಾತ್ರಿ ಸಿಸಿಬಿಯಿಂದ ಸಂಪತ್ ರಾಜ್ ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿ ನಂತರ ಹೆಚ್ಚಿನ ತನಿಖೆಗೆ ಒಳಪಡಿಸಲಾಗುವುದು
ತನಿಖೆಯಲ್ಲಿ ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರಕರಣದಲ್ಲಿ ಸಂಪತ್ ರಾಜ್ ಬಂಧನ ಮಹತ್ವದ್ದಾಗಿತ್ತು.

ಈಗಾಗಲೇ ‌ಇರುವ ಸಾಕ್ಷ್ಯಗಳು ಮತ್ತು ಸಂಪತ್ ರಾಜ್ ಬಂಧನದಿಂದ ಗಲಭೆಗೆ ಕಾರಣ ಯಾರು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here