
Sanatana Dharma: Complaint against Udhay Stalin in Banashankari police station; BJP leader N.R. Ramesh insists registering criminal case
ಬೆಂಗಳೂರು:
100 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಸನಾತನ ಧರ್ಮವನ್ನು ನಾಶ ಮಾಡುವಂತೆ ತಮಿಳುನಾಡು ಸಚಿವ ಉದಯ ಸ್ಟಾಲಿನ್ ಕರೆ ನೀಡಿದ್ದಾರೆ, ಹೀಗಾಗಿ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಒತ್ತಾಯಿಸಿದರು.
ಮಂಗಳವಾರ ಅವರು ಬೆಂಗಳೂರಿನ ಬನಶಂಕರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಐಪಿಸಿ ಸೆಕ್ಷನ್ 120 ಬಿ, 153 ಎ, 295 ಮತ್ತು 504 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಾನು ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ರಮೇಶ್ ಹೇಳಿದರು.