ಬೆಂಗಳೂರು:
ಜ್ವರ ಮತ್ತು ಉಸಿರಾಟದ ತೊಂದರೆಗಳ ಹಿನ್ನೆಲೆಯಲ್ಲಿ ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಆಪ್ತೆ ವಿ ಕೆ ಶಶಿಕಲಾ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅಧಿಕೃತ ಮೂಲಗಳಂತೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಗರದ ಸರ್ಕಾರಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಇಂದು ಮಧ್ಯಾಹ್ನ ದಾಖಲಾಗಿದ್ದಾರೆ.
ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಕೋವಿಡ್ -19 ಗಾಗಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯನ್ನು ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲಿನಲ್ಲಿ ಶಶಿಕಲಾ ಶಿಕ್ಷೆ ಅನುಭವಿಸುತ್ತಿದ್ದು, ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. UNI