ಬೆಂಗಳೂರು:
ಆನಾರೋಗ್ಯದ ಹಿನ್ನೆಲೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಶಶಿಕಲಾ ನಟರಾಜನ್ ಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ಅಸ್ವಸ್ಥಗೊಂಡಿದ್ದು, ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರಿಗೆ ಹೆಚ್ಚಿನ ಚಿಕಿತ್ಸೆಯ ಆಗತ್ಯವಿದ್ದು, ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಂತರ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಶಶಿಕಲಾಗೆ ಕೊರೊನಾ ಪಾಸಿಟಿವ್ ತಗುಲಿರುವುದು ಧೃಡವಾಗಿದೆ. ಈ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.